ಕರಾವಳಿ ಪ್ರದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಜನಾಕರ್ಷಣೆ ಪಡೆದುಕೊಳ್ಳುತ್ತಿರುವ ಒಂದು ಕಾರ್ಯಕ್ರಮವೆಂದರೆ ಯಕ್ಷಗಾನ ಸಂಗೀತ ವೈಭವ . ಇಬ್ಬರು , ಮೂವರು ಯಾ ಹಲವು ಜನ ಭಾಗವತರು ಸೇರಿ ವಿವಿಧ ಪ್ರಸಂಗಗಳಿಂದ ಆಯ್ದ ಪದ್ಯಗಳನ್ನು ಹಾಡಿ ರಸವತ್ತಾಗಿ ನಡೆಸಿಕೊಡುವ ಒಂದು ಕಾರ್ಯಕ್ರಮ . ಇದರಲ್ಲಿ ಏಕತಾನತೆ ಕಳೆಯಲೋ ಎಂಬಂತೆ ಒಬ್ಬ ನಿರೂಪಕ ತನ್ನ ಹಾಸ್ಯ ಮಿಶ್ರಿತ ಮಾತುಗಳಲ್ಲಿ ಕಾರ್ಯಕ್ರಮ ನಿರ್ವಹಣೆ ಮಾಡುತ್ತಾನೆ .
ಕಳೆದ ಕೆಲವು ವರ್ಷಗಳಿಂದ ಈ ಕಾರ್ಯಕ್ರಮದ ಸ್ವರೂಪ ಬಹಳಷ್ಟು ಬದಲಾಗಿದೆ (ಕೆಲವರು ಇದನ್ನು ಬೆಳೆದಿದೆ ಅಂತಲೂ ವ್ಯಾಖ್ಯಾನಿಸುತ್ತಾರೆ ಬಿಡಿ !) ಯಕ್ಷಗಾನಕ್ಕೆ ಪಿಟೀಲು ,ಕೊಳಲು , ತಬಲಾ , ಶಂಖ , ಸೆಕ್ಷಫೋನ್ ಇತ್ಯಾದಿ ಅಳವಡಿಸಿ ಅದೂ ಅಲ್ಲ ಇದೂ ಅಲ್ಲ ಎಂಬ ಯಾವುದೊ ಒಂದು ಮಿಶ್ರಣವನ್ನು ಮಾಡಿ ಹೊಸತನ ಎನ್ನಿಸಿಕೊಳ್ಳುವುದಕ್ಕೆ ಪ್ರಯತ್ನಿಸಿದವರೂ ಇದ್ದಾರೆ . ಮೊದ ಮೊದಲು ಬೇರೆ ಬೇರೆ ಪ್ರಯೋಗಗಗಳನ್ನು ಯಕ್ಷಗಾನ ಸಂಗೀತ ವೈಭವ ಕಾರ್ಯಕ್ರಮ ನೆಪದಲ್ಲಿ
ಮಾಡಿದ್ದು ಅವುಗಳು ಕೇವಲ ಮನೋರಂಜನಾ ದೃಷ್ಟಿಯಲ್ಲಿ ತೆಗೆದು ಅಸ್ವಾದಿಸ ಬೇಕಾದ್ದು ಎಂಬ ನೆಲೆಗೆ ಮಾತ್ರ ಸೀಮಿತವಾಗಿತ್ತು.
ಇತ್ತೀಚಿಗೆ ಯಕ್ಷಗಾನ ಸಂಗೀತ ವೈಭವ ಕಾರ್ಯಕ್ರಮಗಳಲ್ಲಿ ಈ ವಿಚಿತ್ರ ವಾದ್ಯಗಳ ಬಳಕೆ ಕಡಿಮೆಯಾಗತೊಡಗಿ ಕೇವಲ ಯಕ್ಷಗಾನೀಯ ಹಿಮ್ಮೆಳದಲ್ಲೇ ಪದ್ಯಗಳು ಜನರಂಜಿಸತೊಡಗಿದೆ . ವಿವಿಧ ಪ್ರಸಂಗಗಳಿಂದ , ವಿವಿಧ ರಾಗಗಳ , ವಿವಿಧ ರಸಭಾವವನ್ನು ಪ್ರಕಟಿಸಬಲ್ಲ ಹಾಡುಗಳನ್ನು ಆಯ್ದು ಸರಿ ಸುಮಾರು ಮೂರರಿಂದ ನಾಲ್ಕು ಗಂಟೆಗಳ ಕಾರ್ಯಕ್ರಮ ಹೆಚ್ಚು ಜನಪ್ರಿಯವಾಗುತ್ತಿದೆ. ಇಡೀ ರಾತ್ರಿ ಕುಳಿತು ಆಟ ನೋಡಲು ಅಲ್ಲಿ ಬರುವ ವಿವಿಧ ಸನ್ನಿವೇಶಗಳ ವಿವಿಧ ಪದಗಳನ್ನು ಸವಿಯಲು ಅಸಾಧ್ಯವಾದ ಪ್ರೇಕ್ಷಕನಿಗೆ ಇದೊಂದು ಅನುಕೂಲಕರ ಹಾಗೂ ಆಹ್ಲಾದಕರ ಕಾರ್ಯಕ್ರಮವೆನಿಸುತ್ತದೆ.
ಇಲ್ಲಿ ಪರಂಪರೆಯ ಮಟ್ಟುಗಳು , ಹೊಸತನದ ಪೆಟ್ಟುಗಳು , ಆಶು ಸಾಹಿತ್ಯಗಳು ಮುಂತಾದ ವೈವಿಧ್ಯಮಯ ಹಾಡುಗಳು ಕೇಳಲು ಸಿಗುತ್ತವೆ .ಕಾರ್ಯಕ್ರಮದ ಸಂಘಟನಾ ದೃಷ್ಟಿಯಿಂದಲೂ ಇದೊಂದು ಸುಲಭದ ಹೆಚ್ಚು ಹೊರೆಯನ್ನು ನೀಡದ ಕಾರ್ಯಕ್ರಮ .ಎರಡು ಜನ ಭಾಗವತರು ಒಬ್ಬೊಬ್ಬ ಚೆಂಡೆ ಮದ್ದಲೆ ಸಹಕಲಾವಿದರು ಹೀಗೆ ನಾಲ್ಕು ಜನರಿದ್ದರೆ ಒಂದು ಸರಳ ಸುಂದರ ಕಾರ್ಯಕ್ರಮ ಸವಿಯಲು ಸಿಗುತ್ತದೆ !
ಮನೆಗಳಲ್ಲಿ , ಚಿಕ್ಕ-ಪುಟ್ಟ ಸಮಾರಂಭಗಳನ್ನು ನಡೆಸುವಾಗ ಇಂಥ ಕಾರ್ಯಕ್ರಮವನ್ನು ಆಯೋಜಿಸಲು ಹೆಚ್ಚು ಶ್ರಮವಿರುವುದಿಲ್ಲ . ಮಾತ್ರವಲ್ಲ ದೊಡ್ಡ ದೊಡ್ಡ ಕಲಾವಿದರಿಗೆ ಹೇಳಿ ಅವರು
ಕೈ ಕೊಡುವ ಹಾಗೂ ಸಂಘಟಕನಿಗೆ ತಲೆಬಿಸಿಯಾಗಲು ಅವಕಾಶವೂ ಇಲ್ಲ ! ಇದರಿಂದ ಕಲಾವಿದರಿಗೆ ಪ್ರೋತ್ಸಾಹ ನೀಡಿದಂತೆಯೂ ಆಗುತ್ತದೆ. ಒಟ್ಟಿನಲ್ಲಿ ಮಳೆಗಾಲದಲ್ಲಿ ಹಾಗೂ ಸರಳ ಹಾಗೂ ಸಂಕ್ಷಿಪ್ತ ಕಾರ್ಯಕ್ರಮ ಮಾಡಲು ಯೋಚಿಸುವವರಿಗೆ ಇಂಥ
"ಗಾನ-ವೈಭವ" ಅನುಕೂಲಕರವಾಗಿದೆ.
9 comments:
good idea. it is possible to arrange a meaningful program ...
ತಮ್ಮ ವಿಚಾರಗಳು ಬಹಳ ಸಾಧುವಾಗಿವೆ. ಪರಂಪರೆಯನ್ನು ಬದಿಗೊತ್ತದೆ ಅದರ ಚೌಕಟ್ಟಿನಲ್ಲೇ ಪದ್ಯಗಳನ್ನು ಹಾಡುವುದನ್ನು ಕೇಳಿದರೆ ಸಮಯ ಹೋಗುವುದೇ ತಿಳಿಯುವದಿಲ್ಲ. ನನ್ನ ತಂದೆಯವರ ಷಷ್ಟ್ಯಬ್ದ ಪೂರ್ತಿ ಸಂದರ್ಭದಲ್ಲಿ ಇಂತ ಒಂದು ಕಾರ್ಯಕ್ರಮವನ್ನು ಆಯೋಜಿಸಿದ್ದೆವು. ಬಹಳ ಚೆನ್ನಾಗಿ ಬಂದಿತ್ತು. ಅದರ ಕೆಲವು ತುಣುಕುಗಳನ್ನು ಅಂತರ್ಜಾಲದಲ್ಲಿ ಹಾಕಿದ್ದೇನೆ. ಕೇಳಿ ಆನಂದಿಸಿ.
Clip 1
Clip 2
Clip 3
Clip 4
ಉತ್ತಮ ಆಕರ್ಷಕ ಕಾರ್ಯಕ್ರಮದ ರೂಪ ಜನಪ್ರಿಯಗೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ಇದಕ್ಕೆ ಇಂತಹುದೇ ಕಟ್ಟುಪಾಡು ಪರಿಮಿತಿ ಇಲ್ಲ.ಆಯೋಜನೇ ಕೂಡ ಸುಲಭ. ಒಂದು ಸಕಾಲಿಕ ಲೇಖನ
ತುಣುಕುಗಳಿಗಾಗಿ ಕೃತಜ್ಞತೆಗಳು .. ಆ ಕಾರ್ಯಕ್ರಮದ ಪೂರ್ಣ ಸಿ.ಡಿ ಸಿಗಬಹುದೇ ?
kelavu sala dwandwa madidare olledaguttade. especially holla+padyana olle combination
ಹೌದು. ಐದು - ಹತ್ತು ವರ್ಷಗಳ ಹಿಂದೆ ಪದ್ಯಾಣ ಹೊಳ್ಳರ ದ್ವಂದ್ವ ಬಹಳ ಒಳ್ಳೆದಾಗುತ್ತಿತ್ತು
I hosted such program in 2002 in my marriage function. Yakshagana lovers loved it. But others said it disturbed them as they could not talk family gossip!!!!!!!
oh! who are all there in that program? can we get some clips
http://www.sriramarpana.blogspot.com/
Post a Comment