ಯಕ್ಷಗಾನ ಭಾಗವತ ಭೀಷ್ಮರೆನಿಸಿದ ಹಿರಿಯ ಕಲಾವಿದ ಬಲಿಪ ನಾರಾಯಣ ಭಾಗವತರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಲ್ಲುತ್ತಿರುವುದು ನಮಗೆಲ್ಲ ಸಂತೋಷದ ವಿಚಾರ . ತೆಂಕುತಿಟ್ಟಿನ ಭಾಗವತಿಕೆಯ ಸರ್ವಾಂಗೀಣ ಅಧ್ಯಯನ ಸಂಪನ್ನತೆಯುಳ್ಳ ಬಲಿಪರಿಗೆ ಈ ರಾಜ್ಯೋತ್ಸವ ಪ್ರಶಸ್ತಿ ಸಲ್ಲುತ್ತಿರುವುದು ತೆಂಕುತಿಟ್ಟಿನ ಅಭಿಮಾನಿಗಳೆಲ್ಲರಿಗೆ ಹೆಮ್ಮೆಯ ವಿಷಯ . ಬಲಿಪರ ಜೀವಮಾನದ ಸಾಧನೆಗೆ ಸಂದ ಗೌರವ ಇದು . ಬಹಳ ಹಿಂದೆಯೇ ಈ ಪ್ರಶಸ್ತಿ ಅವರಿಗೆ ಸಲ್ಲಬೇಕಿತ್ತು ಈಗಲಾದರೂ ಸರಕಾರ ರಾಜ್ಯೋತ್ಸವ ಪ್ರಶಸ್ತಿ ಕೊಡುತ್ತಿರುವುದು ತೃಪ್ತಿಯ ವಿಷಯ .
ಬಲಿಪರು ಇದರಿಂದ ಸ್ಫೂರ್ತಿ ಪಡೆದು ಇನ್ನು ಹೆಚ್ಚು ವರ್ಷ ನಮ್ಮೆಲರನ್ನು ತಮ್ಮ ಭಾಗವತಿಕೆಯ ಮೂಲಕ ರಂಜಿಸಲಿ ಎಂದು ಮನ:ಪೂರ್ವಕ ಹಾರೈಸುತ್ತೇನೆ.
4 comments:
it was a very pleasant surprise :)
grate grate really grate
ಅತ್ಯಂತ ಅರ್ಹ ವ್ಯಕ್ತಿಗೆ ಈ ವರ್ಷ ಪ್ರಶಸ್ತಿ ಸಂದಿದೆ ಎನ್ನಬಹುದು. ಬಲಿಪರಿಗೆ ಈ ಪ್ರಶಸ್ತಿ ಎಷ್ಟೋ ವರ್ಷ ಮೊದಲೆ ಸಿಗಬೇಕಿತ್ತು. ಒಂದು ಸಂತಸದ ವಿಷಯ ಎಂದರೆ, ಈ ಪ್ರಶಸ್ತಿಯ ವಿಷಯದಲ್ಲಿ ಯವುದೇ ರಾಜಕೀಯ ಹಸ್ತಕ್ಷೇಪ ಇಲ್ಲದಿರುವುದು. ಹಾಗಾಗಿ ಪ್ರಶಸ್ತಿಯ ಗೌರವ ಇನ್ನು ಹೆಚ್ಚಿದೆ. ಬಲಿಪ ಭಾಗವತರು ನೂರ್ಕಾಲ ಬಾಳಿ ಯಕ್ಷ ಪ್ರಿಯರನ್ನು ರಂಜಿಸಲಿ, ಅವರಿಗೆ ಭಗವಂತ ಆರೋಗ್ಯ ಭಾಗ್ಯ ಕರುಣಿಸಲಿ.
Very glad
Post a Comment