ದಿನ ಪತ್ರಿಕೆಯಲ್ಲಿನ ಸುದ್ದಿ ಓದಿದಾಗ ನಿಜವಾಗಿಯೂ ಯಕ್ಷಾಭಿಮಾನಿಗಲ್ಸಂತಸ ಪಡಬೇಕಾದ ವಿಚಾರ . ಯಕ್ಷಗಾನವು ಯಾವ ರಾಜಾಶ್ರಯವಿಲ್ಲದೆ , ಸರಕಾರದ ಕೃಪಾಶ್ರಯವಿಲ್ಲದೆ, ಬರಿಯ ಅಭಿಮಾನಿ ಸೇವಾರ್ಥಿ ಸಜ್ಜನ ಬಂಧುಗಳಿಂದ ಇಂದಿಗೂ ತನ್ನ ಸತ್ವವನ್ನು ಉಳಿಸಿಕೊಂಡು ವಿಕಾರತೆಗಳಿದ್ದರೂ ತನ್ನ ಕಂಪನ್ನು ಬೀರುತ್ತ ಜೀವಂತವಾಗಿ ಇದೆ.ಬೇರೆ ಬೇರೆ ದೇವಳದ ಆಶ್ರಯದಲ್ಲಿ ಹಲವಾರು ಮೇಳಗಳಿವೆ. ವರ್ಷಾನುಗಟ್ಟಲೆ ಸೇವಾರೂಪದ ಯಕ್ಷಗಾನ ಆಖ್ಯಾನಗಳನ್ನು ಆಡಿಸುವ ಸೇವಾರ್ಥಿಗಳು, ಪ್ರಾಯೋಜಕರು ಇದ್ದಾರೆ . ಆದರೆ ಸೇವಾರ್ಥಿಗಳು ನಡೆಸುವ ಪ್ರದರ್ಶನದ ಗುಣಮಟ್ಟವನ್ನು ಕಾಯ್ದುಕೊಳ್ಳುವ ಕಲಾವಿದರಿದ್ದಾರೆಯೇ ? ಎಂಬುದು ದೊಡ್ಡ ಪ್ರಶ್ನೆ . ಮುಂದೆ ಈಗಿರುವ ಪ್ರದರ್ಶನದ ಗುಣಮಟ್ಟವನ್ನಾದರು ಉಳಿಸಿಕೊಂಡು ಹೋಗಬಲ್ಲ ಯುವಕಲಾವಿದರು ರೂಪುಗೊಳ್ಳುತ್ತಿದ್ದಾರೆಯೇ ?
ಇಂದು ಎಲ್ಲ ಕ್ಷೇತ್ರಗಳಲ್ಲೂ ನುರಿತ ವೃತ್ತಿಪರರ ಕೊರತೆ ಇದೆ .ಯಕ್ಷರಂಗವನ್ನಂತೂ ಇದು ತೀವ್ರವಾಗಿ ಬಾಧಿಸುತ್ತಿರುವ ಸಮಸ್ಯೆ . ಇತ್ತೀಚಿಗೆ ತೆಂಕಿನ ಪ್ರಖ್ಯಾತ ಮೇಳದ ಯಜಮಾನರು ಹಿಮ್ಮೇಳ ಕಲಾವಿದರ ಕೊರತೆ ಬಗ್ಗೆ ಪ್ರಸ್ತಾಪಿಸುತ್ತಾ ಮುಂದೆ ಇದು ದೊಡ್ಡ ಸಮಸ್ಯೆಯಾಗಿ ಮುಂದುವರಿದಲ್ಲಿ ಸೇವೆಯನ್ನು ನಡೆಸುವುದು ಹೇಗೆ ? ಎಂದು ಯೋಚಿಸಬೇಕಾಗುತ್ತದೆ ಎಂದದ್ದು ಇದರ ತೀವ್ರತೆಯನ್ನು ತಿಳಿಸುತ್ತದೆ . ಹಲವು ದಶಕಗಳಿಂದ ಮೇಳ ನಡೆಸುತ್ತಿದ್ದ ಓರ್ವ ಯಜಮಾನರು ಇದ್ದದ್ದನ್ನೆಲ್ಲ ಉದಾರವಾಗಿ ಒಂದು ಸಂಸ್ಥೆಗೆ ದಾನವಿತ್ತು ಇನ್ನು ನನ್ನಿಂದ ಅಸಾಧ್ಯ ಎಂದು ದಿನಸಿ ಅಂಗಡಿ ತೆರೆದದ್ದು ವಿಷಾದಕರವಾದರೂ ಕಾಟು ಸತ್ಯ !
ಈಗಿನ ಹಿರಿಯ ಕಲಾವಿದರನ್ನು ನೋಡಿದಾಗ ಮುಂದೆ ಇಂಥ ಪ್ರದರ್ಶನಗಳನ್ನು ನೀಡುವ ಚೈತನ್ಯ ಯುವ ಕಲಾವಿದರು ಹೊಂದಿರುವರೆ ಅನುಮಾನ ಮೂಡುತ್ತದೆ !
ಹಾಗೆಂದು ತಾಳಮದ್ದಲೆ ಕ್ಷೇತ್ರಕ್ಕೆ ಇದೊಂದು ಅಪವಾದ . ಇಲ್ಲಿ ಹೆಚ್ಚಿನ ಎಲ್ಲರೂ ಹವ್ಯಾಸಿಗಳೇ ಕಲಾಪ್ರಕಾರ ಉಳಿಸಿಕೊಂಡು ಬರುತ್ತಿದ್ದಾರೆ.
ಆದಾಯ ಕಡಿಮೆ, ನಿದ್ದೆ ಕೆಡುವಿಕೆ, ಆಹಾರ ವೆತ್ಯಾಸಗಳು ಪ್ರಮುಖ ಸಮಸ್ಯೆಗಳೆಂದು ಹೇಳಿದರೂ ಈಗ ಅವಕಾಶಗಳು ಹಲವಾರಿದೆ, ಕಡಿಮೆ ಕಲಿತವನಿಗೂ ಉದ್ಯೋಗ ಖಾತ್ರಿ ಇದೆ ! ಹಾಗಾಗಿ ಆತಕ್ಕೆಕೆ ಹೋಗಬೇಕು ? ಊರೂರೇಕೆ ಸುತ್ತಬೇಕು? ಎಂಬ ಭಾವ ಹೆಚ್ಚಾಗತೊಡಗಿ ಸಮಸ್ಯೆ ಉಲ್ಬಣಗೊಳ್ಳುತ್ತಿದೆ .
ಕಲೆಯನ್ನೇ ವೃತ್ತಿಯನ್ನಾಗಿ ಸ್ವೀಕರಿಸುವ ಯುವ ಜನತೆ ತೀವ್ರವಾಗಿ ಕ್ಷೀಣಿಸುತ್ತಿರುವ ಈ ಕಾಲದಲ್ಲಿ ಸೇವೆ ಆಟಗಳು ಬೇಕಾದಷ್ಟಿವೆ ... ಕಲಾವಿದರೆಲ್ಲಿದ್ದಾರೆ ? ಅಲ್ಲವೇ !
5 comments:
What you said is really true. Many of our native arts are diminishing beacuase of this reason. Very good work. And a very well designed blog. Nimma sahityanu tumba chennagide. Thank you for sharing. Please visit my blog and do follow it.
http://malenadugroup.blogspot.com/
Online Dating
Like it!
Check out my "Fiat 500 Review" ;-)
ನೀವು ಹೇಳಿದ್ದು ಅಕ್ಷರಶಃ ಸತ್ಯ. ಈಗಿನ ಮೇಳಗಳನ್ನೇ ನೋಡುವಾಗ ಉತ್ತಮ ಕಲಾವಿದರ ಕಂಡು ಬರುತ್ತದೆ. ಮೊನ್ನೆ ಮೊನ್ನೆ ಪ್ರಾರಂಭವಾದ ಮೇಳದ ಹರಕೆ ಆಟಕ್ಕೆ ಹೋಗಿದ್ದೆ. ಅ ಮೇಳವನ್ನು ಪೋಷಿಸುವ ಕ್ಷೇತ್ರ ಮಹಾತ್ಮೆ ಪ್ರಸಂಗ. ಬಾಲಿಶ ಪದ್ಯ ರಚನೆ, ಸಾಧಾರಣ ಮಾತುಕತೆಗಳಿಂದಾಗಿ ಆಟಕ್ಕೆ ರಂಗು ಏರಲೇ ಇಲ್ಲ. ಬಗಲ ಕಷ್ಟ ಪಟ್ಟು ೨ ಗಂಟೆ ದೂಡಿ, ಮನೆಗೆ ಬಂದೆ. ಹಿಮ್ಮೇಳ, ಮುಮ್ಮೇಳ ಮಾತ್ರವಲ್ಲದೆ ಇತರ ಕಲಾವಿದರ ಕೊರತೆಯೂ ಬಹಳಷ್ಟು ಕಾಣಿಸುತ್ತಿದೆ. ಪ್ರಸಂಗ ರಚನೆ ಮಾಡುವವರಿಗೆ ಇರಬೇಕಾದ ಮಟ್ಟುಗಳ ಜ್ಞಾನ, ಶುದ್ಧತೆ ಕಂಡು ಬರುವುದು ಅಪರೂಪವಾಗಿದೆ. ನೇಪಥ್ಯ ಹಾಗೂ ಸಹಾಯಕ್ಕೆ ಕೆಲಸದವರು ಇಲ್ಲವಾಗಿದ್ದರೆ. ಇವುಗಳ ಕಡೆಗೂ ದೇವಸ್ಥಾನಗಳು ಗಮನ ಹರಿಸಬೇಕಾಗಿದೆ.
thank you sir for your comments
Post a Comment